ಮಂಗಳೂರು: ನಗರದ ಹೊರವಲಯದ ಅಡ್ಯಾರ್ ಕಣ್ಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಹೆದ್ದಾರಿಯಲ್ಲಿ ಕೆಲಕಾಲ ಭಾರಿ ವಾಹನ ಸಂಚಾರಸ್ತಬ್ದಗೊಂಡು, ಟ್ರಾಫಿಕ್ ಜಾಮ್ ಉಂಟಾದ ಘಟನೆ ವರದಿಯಾಗಿದೆ.
ಘಟನೆಯ ವಿವರ: ಮಂಗಳೂರು ಕಡೆಯಿಂದ ತೆರಳುತ್ತಿದ್ದ ಗ್ಯಾಸ್ ಲಾರಿಯು ಅಡ್ಯಾರ್ ಕಣ್ಣೂರು ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿಬಿದ್ದಿದೆ.
ಸಂಚಾರ ಅಸ್ತವ್ಯಸ್ತ: ಘಟನೆಯಿಂದಾಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಬಂದ್ ಆಗಿತ್ತು. ರಸ್ತೆಯ ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಗಲೋಗi ಸಾಲುಗಟ್ಟಿ ನಿಂತು ವಾಹನ ಸವಾರರು ಪರದಾಡುವಂತಾಯಿತು.
ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಕಾರ್ಯಾಚರಣೆ: ವಿಷಯ ತಿಳಿದ ತಕ್ಷಣ ಸಂಚಾರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ಧಾವಿಸಿ ಹತ್ತಿರವಿರುವ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ, ಅನಿಲ ಸೋರಿಕೆ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
