10ಕ್ಕೂ ಹೆಚ್ಚು ಮನೆಗಳ ವಿದ್ಯುತ್ ಉಪಕರಣಗಳಿಗೆ ಹಾನಿ – ಗ್ರಾಮಸ್ಥರ ಆತಂಕ
ಪೈಚಾರ್ ಸಮೀಪದ ಆರ್ತಾಜೆ ಪ್ರದೇಶದಲ್ಲಿ ಉಂಟಾದ ಹೈ ವೋಲ್ಟೇಜ್ ಸಮಸ್ಯೆಯಿಂದಾಗಿ ಸುಮಾರು 10ಕ್ಕೂ ಹೆಚ್ಚು ಮನೆಗಳಲ್ಲಿನ ಬಲ್ಬ್, ಫ್ಯಾನ್, ಫ್ರಿಡ್ಜ್ ಹಾಗೂ ನೀರಿನ ಮೋಟಾರ್ ಸೇರಿದಂತೆ ಹಲವು ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿವೆ.
ಹಠಾತ್ ಉಂಟಾದ ವಿದ್ಯುತ್ ವೋಲ್ಟೇಜ್ ಏರಿಕೆಯಿಂದ ಗ್ರಾಮಸ್ಥರಿಗೆ ಆರ್ಥಿಕ ನಷ್ಟ ಸಂಭವಿಸಿದ್ದು, ಈ ಸಮಸ್ಯೆಯಿಂದಾಗಿ ಜನರು ಆತಂಕಕ್ಕೊಳಗಾಗಿದ್ದಾರೆ.
ಸಂಬಂಧಪಟ್ಟ ವಿದ್ಯುತ್ ಇಲಾಖೆಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಪರಿಶೀಲಿಸಿ, ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಹಾನಿಗೊಳಗಾದ ವಿದ್ಯುತ್ ಉಪಕರಣಗಳಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
