ಅನ್ವಾ ರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ (AHYA) ಸುವರ್ಣ ಮಹೋತ್ಸವದ ಪ್ರಯುಕ್ತ ಹಾಗೂ ಭಾರತೀಯ ಅಂಚೆ ಇಲಾಖೆಯ ಸಹಯೋಗದೊಂದಿಗೆ ಸೆ.14 ರಂದು ಬೃಹತ್ ‘ಆಧಾರ್ ಕ್ಯಾಂಪ್’ (ವಿಶೇಷ ಆಧಾರ್ ಶಿಬಿರ) ಅನ್ನು ಆಯೋಜಿಸಲಾಗಿದೆ.
ಈ ವಿಶೇಷ ಶಿಬಿರವು ಪಠೇಲ್ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಲಿದ್ದು, ಸಾರ್ವಜನಿಕರು ತಮ್ಮ ಹೊಸ ಆಧಾರ್ ಕಾರ್ಡ್ ನೋಂದಣಿ, ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ನವೀಕರಣ (Update) ಹಾಗೂ ಬಯೋಮೆಟ್ರಿಕ್ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಅಂಚೆ ಇಲಾಖೆಯ ನುರಿತ ಸಿಬ್ಬಂದಿಗಳು ಸ್ಥಳದಲ್ಲೇ ಸೇವೆ ಒದಗಿಸಲಿದ್ದು, ಸುತ್ತಮುತ್ತಲಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಉಚಿತ/ವಿಶೇಷ ಆಧಾರ್ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಸಂಘಟಕರು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.
