ಐಪಿಎಲ್ 47ನೇ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ ನಿಗಧಿತ 209ರನ್ ಗಳ ಬೃಹತ್ ಮೊತ್ತ ಪೇರಿಸಿತು. 210 ರನ್‌ಗಳ ಬೃಹತ್ ಮೊತ್ತದ ಚೇಸ್ ಸಂದರ್ಭದಲ್ಲಿ ಅಬ್ಬರಿಸಿದ 14 ವರ್ಷದ ಯಂಗ್ ಬ್ಯಾಟರ್ ವೈಭವ್ ಸೂರ್ಯವಂಶಿ ವರ್ಲ್ಡ್ ಕ್ಲಾಸ್ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಅವರು ಕೇವಲ 35 ಎಸೆತಗಳಲ್ಲಿ 100 ರನ್ ಗಳಿಸುವ ಮೂಲಕ ಜಗತ್ತಿನ ಯಾವುದೇ ಆಟಗಾರ ಮಾಡದ ಸಾಧನೆಯನ್ನು ಮಾಡಿದರು. ಅವರು ಟಿ-20 ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಅತೀ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

Leave a Reply

Your email address will not be published. Required fields are marked *