ಐಪಿಎಲ್ 2025 ರ 58 ನೇ ಪಂದ್ಯವು ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿತ್ತು ಈ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ರದ್ದು ಮಾಡಲಾಗಿದೆ. ಪಂದ್ಯ ನಡೆಯುತ್ತಿದ್ದ ಮೈದಾನದಲ್ಲಿನ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದ್ದು, ಪಂದ್ಯವನ್ನು ನೋಡಲು ಬಂದಿದ್ದ ಅಭಿಮಾನಿಗಳಿಗೆ ಮನೆಗೆ ಹೋಗುವಂತೆ ಸೂಚಿಸಲಾಗಿದೆ. ಪಂದ್ಯ ರದ್ದಾಗುವ ಮುನ್ನ ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿತು. ಈ ವೇಳೆ ತಂಡದ ಆರಂಭ ಭರ್ಜರಿಯಾಗಿತ್ತು. ಪ್ರಿಯಾಂಶ್ ಆರ್ಯ, ಪ್ರಭಸಿಮ್ರನ್ ಸಿಂಗ್ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ವೇಳೆ ಪ್ರಿಯಾಂಶ್ ಆರ್ಯ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 34 ಎಸೆತಗಳಲ್ಲಿ 5 ಬೌಂಡರಿ, 6 ಸಿಕ್ಸರ್ ಸಹಾಯದಿಂದ 70 ರನ್ ಸಿಡಿಸಿದರು. ಇನ್ನು ಪ್ರಭಸಿಮ್ರನ್ ಸಿಂಗ್ 28 ಎಸೆತಗಳಲ್ಲಿ 7 ಬೌಂಡರಿ ಸೇರಿದಂತೆ ಅಜೇಯ 50 ರನ್ ಬಾರಿಸಿದ್ದಾಗ ಪಂದ್ಯವನ್ನು ರದ್ದುಗೊಳಿಸಲಾಯಿತು.