ನಮ್ಮ ಮೆಟ್ರೋ ಸಿಲಿಕಾನ್ ಸಿಟಿ ಜನರ ಜೀವನಾಡಿ. ಈ ವೇಗದೂತ ಮೂಲಕ ಪ್ರತಿನಿತ್ಯ ಲಕ್ಷಾಂತರ ಜನರು ನಗರದ ಮೂಲೆ ಮೂಲೆಗೆ ಸಂಚಾರ ಮಾಡುತ್ತಾರೆ. ಆದರೆ ನಮ್ಮ ಮೆಟ್ರೋ ಹೆಣ್ಣು ಮಕ್ಕಳಿಗೆ ಎಷ್ಟು ಸುರಕ್ಷಿತ ಎಂಬ ಅನುಮಾನಗಳು ಆಗಾಗ ಮೂಡುತ್ತವೆ. ಏಕೆಂದರೆ ಮೆಟ್ರೋದಲ್ಲಿ ಹುಡುಗಿಯರ (girl) ಆಕ್ಷೇಪಾರ್ಹ ವಿಡಿಯೋಗಳನ್ನು ಮಾಡಿ ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡುವ ಮೂಲಕ ಅಪರಿಚಿತನೋರ್ವ ವಿಕೃತಿ ಮೆರೆದಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ಬೆನ್ನಲ್ಲೇ ಇದೀಗ ಎಲ್ಲಾ ವಿಡಿಯೋಗಳನ್ನು ಡಿಲೀಟ್ ಮಾಡಲಾಗಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಇನ್ಫ್ಲ್ಯುನ್ಸರ್ ವಝೀಮ್ ಇದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಹಾಕಿದ್ದರು. ಇದೀಗ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ (ಸುಮೊಟೋ ಕೇಸ್) ಪ್ರಕರಣ ದಾಖಲಾಗಿದೆ. ‘ಮೆಟ್ರೋ ಚಿಕ್ಸ್” ಎಂಬ ಇನ್ಸ್ಟಾಗ್ರಾಂ ಖಾತೆಯಲ್ಲಿ ಮೆಟ್ರೋದಲ್ಲಿನ ಹುಡುಗಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ಅಪ್ಲೋಡ್ ಮಾಡಲಾಗಿದೆ. 5,538 ಹಿಬಾಲಕರನ್ನು ಹೊಂದಿರುವ ಖಾತೆಯಲ್ಲಿ ಸುಮಾರು 13ಕ್ಕೂ ಹೆಚ್ಚು ವಿಡಿಯೋಗಳನ್ನು ಅಪರಿಚಿತನೋರ್ವ ಹಂಚಿಕೊಂಡಿದ್ದಾನೆ. ಮೆಟ್ರೋ ರೈಲಿನ ಒಳಗೆ, ನಿಲ್ದಾಣಗಳಲ್ಲಿ ಹುಡುಗಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ರೆಕಾರ್ಡ್ ಮಾಡಲಾಗಿದೆ.