ದೇವಸ್ಥಾನಕ್ಕೆ ತೆರಳಿದ್ದಂತ ಸಂದರ್ಭದಲ್ಲಿ ಕಾಲು ಜಾರಿ ಬಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿರುವುದಾಗಿ ತಿಳಿದು ಬಂದಿದೆ. ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಸನದ ಹೊಳೆನರಸೀಪುರದಲ್ಲಿ ದೇವಸ್ಥಾನಕ್ಕೆ ತೆರಳಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಾಲು ಜಾರಿ ಬಿದ್ದಿದ್ದಾರೆ.
ಇದರಿಂದಾಗಿ ಹೆಚ್.ಡಿ ರೇವಣ್ಣ ಅವರ ಪಕ್ಕೆಲುಬಿಗೆ ಪೆಟ್ಟಾಗಿರೋದು ಪರೀಕ್ಷೆಯಿಂದ ತಿಳಿದು ಬಂದಿದೆ.
ಮಾಜಿ ಸಚಿವ ಹೆಚ್.ಡಿ ರೇವಣ್ಣ ಇದೀಗ ಹೊಳೆನರಸೀಪುರದಲ್ಲಿನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಷಾಡ ಏಕಾದಶಿ ಪ್ರಯುಕ್ತ ಅವರು ಉಪವಾಸವಿದ್ದರು ಎನ್ನಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.