ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆ ಗುಜರಾತ್ ರಾಜ್ಯದ ಅಹಮದಾಬಾದ್‌ನ ವಿಮಾನ ನಿಲ್ದಾಣ ಸಮೀಪದ ಜನವಸತಿ ಪ್ರದೇಶದಲ್ಲಿ ನಡೆದಿದೆ.

ಈ ವಿಮಾನದಲ್ಲಿ ಸುಮಾರು 242 ಪ್ರಯಾಣಿಕರಿದ್ದರು ಎನ್ನಲಾಗಿದೆ. ವಿಮಾನ ಪತನಗೊಂಡು ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದೆ. ಮಧ್ಯಾಹ್ನ 1:50ರ ಸುಮಾರಿಗೆ ಅಹಮದಾಬಾದ್‌ನ ಮೇಘಾನಿ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ವಿಮಾನ ಪ್ರಯಾಣಿಕರನ್ನು ಹೊತ್ತು ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುವ ವೇಳೆ ಈ ದುರ್ಘಟನೆ ನಡೆದಿದೆ. ಟೇಕಾಫ್ ಆದ 2 ಕಿ.ಮೀ ದೂರದಲ್ಲಿ ವಿಮಾನ ಪತನಗೊಂಡಿದೆ. ಘಟನಾ ಸ್ಥಳಕ್ಕೆ 7 ಅಗ್ನಿ ಶಾಮಕ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ. ಘಟನೆಯಲ್ಲಿ ಹಲವು ಸಾವು-ನೋವು ಉಂಟಾಗಿರುವ ಶಂಕೆ ವ್ಯಕ್ತವಾಗಿದೆ.