ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗುವೊಂದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ದಾರುಣ ಘಟನೆ ಅಡ್ಯಾರ್‌ನಲ್ಲಿ ನಡೆದಿದೆ.

ಬಿಹಾರ ಮೂಲದ ದಂಪತಿಯ 10 ತಿಂಗಳ ಅನೀಶ್‌ಕುಮಾರ್ ಮೃತಪಟ್ಟ ಮಗು.

ಜೂನ್ 14ರ ಮಧ್ಯಾಹ್ನ 1:30 ರ ವೇಳೆ ಈ ಘಟನೆ ನಡೆದಿದೆ. ಮಗುವನ್ನು ಅಪರಾಹ್ನ 3:30 ರ ವೇಳೆಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಮಗು ಚಿಕಿತ್ಸೆ ಫಲಿಸದೆ ಜೂನ್ 15ರ ಬೆಳಗ್ಗೆ 10:25 ರ ವೇಳೆ ಕೊನೆಯುಸಿರೆಳೆದಿದೆ.

‘ತನ್ನ ಪತಿಯ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಸಾವಿಗೀಡಾಗಿದೆ. ಮನೆಯೊಳಗೆ ಬೀಡಿ ಸೇದಿ ಎಸೆಯದಂತೆ ಹಲವು ಬಾರಿ ಗಂಡನಿಗೆ ತಿಳಿಸದ್ದರೂ, ನಿರ್ಲಕ್ಷ್ಯ ಮಾಡಿದ ಪರಿಣಾಮ ಮಗುವಿನ ಪ್ರಾಣ ಹೋಗಿದೆ’ ಎಂದು ತಾಯಿ ದೂರಿನಲ್ಲಿ ಆರೋಪಿಸಿರುವುದಾಗಿ ವರದಿಯಾಗಿದೆ.

Leave a Reply

Your email address will not be published. Required fields are marked *