ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಎನ್. ಸಿ. ಸಿ, ಎನ್. ಎಸ್. ಎಸ್, ಹಾಗೂ ಐ. ಕ್ಯೂ. ಎ. ಸಿ ವಿಭಾಗಗಳ ಸಹಭಾಗೀತ್ವದಲ್ಲಿ ದಿನಾಂಕ 21/06/2025 ರಂದು ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎo ಎo ರವರು ವಹಿಸಿದ್ದರು. ಹಾಗೆಯೇ ಸುಳ್ಯದ ಆರ್ಟ್ ಆಫ್ ಲಿವಿಂಗ್ ನ ಯೋಗ ಭೋಧಕಿಯಾದ ಶ್ರೀಮತಿ ಉಷಾ ಕೆ ಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸವನ್ನು ಮಾಡಿಸುವುದರ ಮೂಲಕ ಯೋಗದ ಮಹತ್ವವನ್ನು ತಿಳಿಸಿದರು, ಹಾಗೂ ಆರೋಗ್ಯ ಮತ್ತು ಸಾಮರಸ್ಯಕ್ಕಾಗಿ ದೈನಂದಿನ ಜೀವನದಲ್ಲಿ ಯೋಗವನ್ನು ಸೇರಿಸಿಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದರು.ಈ ಕಾರ್ಯಕ್ರಮದಲ್ಲಿ ನೆಹರೂ ಮೆಮೊರಿಯಲ್ ಕಾಲೇಜಿನ ಎನ್.ಸಿ.ಸಿ ವಿಭಾಗದ ಅಸೋಸಿಯೇಟ್ ಎನ್.ಸಿ.ಸಿ ಆಫೀಸರ್ ಲೆಫ್ಟಿನೆಂಟ್.ಸೀತಾರಾಮ.ಎಂ.ಡಿ, ಐ.ಕ್ಯೂ.ಎ.ಸಿ. ಸಂಯೋಜಕಿ ಶ್ರೀಮತಿ ಡಾ.ಮಮತಾ.ಕೆ,ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ ಹಾಗೆಯೇ ಕಾಲೇಜಿನ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
