ಉಳ್ಳಾಲ ಹಾಗೂ ಹಲವಾರು ಮೊಹಲ್ಲಾದ ಸಂಯುಕ್ತ ಖಾಝಿಯಾಗಿ ಖಮರುಲ್ ಉಲಮಾ ಇಂಡಿಯನ್ ಗ್ರಾಂಡ್ ಮುಫ್ತಿ ಶೈಖುನಾ ಕಾಂದಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಆಯ್ಕೆಯಯಾಗಿದ್ದಾರೆ.
ಖಾಝಿ ಆಯ್ಕೆಗೆ ಸಂಬಂಧಿಸಿ ಉಳ್ಳಾಲ ದರ್ಗಾ ವಠಾರದ ಮದನಿ ಹಾಲಿನಲ್ಲಿ ರವಿವಾರ ಮಧ್ಯಾಹ್ನ ನಡೆದ ಮಹಾಸಭೆ ಯಲ್ಲಿ ಎ.ಪಿ. ಉಸ್ತಾದ್ ಅವರನ್ನು ಖಾಝಿಯಾಗಿ ನೇಮಕ ಮಾಡಲು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಆಗಸ್ಟ್ 5ರಂದು ಅಧಿಕಾರ ಸ್ವೀಕಾರ ನಡೆಯಲಿದೆ ಎಂದು ದರ್ಗಾ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ ಮತ್ತು ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.