n6231709611721652983235cfcb5bead18848fc83c3c1ca46b2bc775f0154092efc9a434a0ba5e77aad9d83n6231709611721652983235cfcb5bead18848fc83c3c1ca46b2bc775f0154092efc9a434a0ba5e77aad9d83

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು.

ಈ ಬಳಿಕ ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಅಂದಹಾಗೇ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಸಂಬಂಧ ಎರಡು ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಭೇಟಿಯಾಗಬಾರದು. ಅರ್ಜಿದಾರರು ಇದೇ ರೀತಿಯ ಅಪರಾಧವನ್ನು ಮಾಡಬಾರದು. ಅರ್ಜಿದಾರರು ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಸೇರಿದಂತೆ ವಿವಿಧ ಷರತ್ತುಗಳನ್ನು ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.

Leave a Reply

Your email address will not be published. Required fields are marked *