
ಸುಳ್ಯ ನೆಹರು ಮೆಮೊರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ನಂದನ ದಿನ” ಅಗಸ್ಟ್ 30ನೇ ಶನಿವಾರದಂದು ನಡೆಯಿತು.
ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಶೈಕ್ಷಣಿಕ ಸಾಧನೆ ಜೊತೆಗೆ ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಗಳಲ್ಲಿಯೂ ತೊಡಗಿಕೊಳ್ಳಬೇಕೆಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರದ ಡಾ. ರುದ್ರ ಕುಮಾರ್ ಎಂ ಎಂ ವಹಿಸಿದ್ದರು. ವೇದಿಕೆಯಲ್ಲಿ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕರಾದ ಡಾ. ಮಮತಾ ಕೆ ಉಪಸ್ಥಿತರಿದ್ದರು.
ಕಾಲೇಜಿಗೆ ನೂತನವಾಗಿ ಪ್ರವೇಶ ಪಡೆದುಕೊಂಡ ಪ್ರಥಮ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಮನರಂಜನ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ಕಾಲೇಜಿನ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಕು. ತುಳಸಿ ಸ್ವಾಗತಿಸಿ, ದ್ವಿತೀಯ ಬಿಸಿಎಯ ಕು. ಯಶಿತ ವಂದಿಸಿದರು. ದ್ವಿತೀಯ ಬಿಎಸ್ಸಿಯ ಕು. ಪ್ರೀಕ್ಷ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎಲ್ಲಾ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಸಹಕರಿಸಿದರು.
