Nammasullia: ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ವಿದ್ಯಾರ್ಥಿ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಗಳ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಅಣ್ಣಯ್ಯ ಕೆ. ಸಭಾಧ್ಯಕ್ಷತೆ ವಹಿಸಿದ್ದರು. ಸಮಾರಂಭದ ವೇದಿಕೆಯಲ್ಲಿ ಉಪಪ್ರಾಂಶುಪಾಲ ಹರೀಶ್ ಕುಮಾರ್ ಪಿ. ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ಪ್ರಭುಲಿಂಗ ಡಿ.ಯಚ್, ಪ್ರಜ್ಞಾ ಕೆ.ಆರ್., ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಚಂದ್ರಶೇಖರ ಬಿಳಿನೆಲೆ, ಸುನಿಲ್ ಕುಮಾರ್ ಎನ್ .ಪಿ , ಕಚೇರಿ ಲೆಕ್ಕ ಅಧೀಕ್ಷಕ ಧನಂಜಯ ಕಲ್ಲುಗದ್ದೆ ಉಪಸ್ಥಿತರಿದ್ದು ಶುಭ ಹಾರೈಸಿದರು.
ವಿದ್ಯಾರ್ಥಿಗಳಾದ ಮಹಮ್ಮದ್ ಮಸೂದ್, ಅಪೂರ್ವ ಮತ್ತು ಕಾವ್ಯಶ್ರೀ ಶಿಕ್ಷಕರ ದಿನಾಚರಣೆಯ ಬಗ್ಗೆ ಮಾತನಾಡಿದರು.
ವಿದ್ಯಾರ್ಥಿಗಳು ಎಲ್ಲಾ ಶಿಕ್ಷಕರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಸಭಾ ಕಾರ್ಯಕ್ರಮದ ನಂತರ ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ನೀಡಲಾಯಿತು.
ವಿದ್ಯಾರ್ಥಿನಿಯರಾದ ಜಾಹ್ನವಿ ಸ್ವಾಗತಿಸಿ, ಕಾವ್ಯ ವಂದಿಸಿದರು. ದೀಕ್ಷಿತಾ ಕೆ.ಸಿ ಕಾರ್ಯಕ್ರಮ ನಿರೂಪಿಸಿದರು.


