ಯುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ತರಬೇತಿ, ಮಾಹಿತಿ ಹಾಗೂ ಶಿಬಿರಗಳನ್ನು ಏರ್ಪಡಿಸಿ ಭವಿಷ್ಯದ ಕ್ರೀಡಾಪಟುಗಳನ್ನಾಗಿ ರೂಪಿಸುವ ಉದ್ದೇಶದೊಂದಿಗೆ ಸ್ಥಾಪಿತವಾಗಿರುವ ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ (UEA) ವತಿಯಿಂದ ಆಯೋಜಿಸಲಾಗಿರುವ “ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025” ಕಾರ್ಯಕ್ರಮವು ದಿ. 12.09.2025 ಶುಕ್ರವಾರದಂದು ಮಂಗಳೂರಿನ ಇಂಡಿಯಾನಾ ಕನ್ವೆನ್ಸನ್ ಸೆಂಟರ್‌ನಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರಿಗೆ ಸುಳ್ಯದಿಂದ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಯುವ ನಾಯಕತ್ವ, ವೃತ್ತಿ ಮಾರ್ಗದರ್ಶನ ಮತ್ತು ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರವನ್ನು ಬಲಪಡಿಸುವ ಉದ್ದೇಶದೊಂದಿಗೆ ಯುಇಎಯ 21 ವಲಯಗಳಾದ ಮಂಗಳೂರು, ಪಡುಬಿದ್ರಿ, ಉಳ್ಳಾಲ, ಬಂಟ್ವಾಳ, ವಿಟ್ಲ, ಪುತ್ತೂರು, ಬೆಳ್ತಂಗಡಿ ಕೈಕಂಬ-ಬಟ್ಟೆ, ಮೂಡಬಿದ್ರಿ-ಕಾರ್ಕಳ, ಸುಳ್ಯ, ಸುರತ್ಕಲ್-ಜೋಕಟ್ಟೆ, ಕಾಪು, ಉಪ್ಪಿನಂಗಡಿ, ಫರಂಗಿಪೇಟೆ, ಶಿರೂರ್ ಮತ್ತು ಕುಂದಾಪುರ ವಲಯ ವ್ಯಾಪ್ತಿಯಲ್ಲಿ ಬರುವ ಯುವಕರನ್ನು ಒಟ್ಟುಗೂಡಿಸಿ “ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವು ಸಂಜೆ 7.00 ಗಂಟೆಯಿಂದ ಪ್ರಾರಂಭವಾಗಲಿದ್ದು, ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಭಾರತೀಯ ಸೊಸೈಟಿ ಕಾಯ್ದೆಯಡಿ ನೋಂದಾಯಿತವಾದ ಈ ಸಂಸ್ಥೆ ಕರ್ನಾಟಕದಲ್ಲಿ ಕ್ರೀಡೆ ಮತ್ತು ಆಟಗಳನ್ನು ಬೆಳೆಸಲು ಶ್ರಮಿಸುತ್ತಿದೆ. ಈ ಕ್ಷೇತ್ರದಲ್ಲಿ ಪ್ರಮುಖ ಧ್ವನಿಯಾಗಿ ಹೊರಹೊಮ್ಮಲು ಬದ್ಧವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ 7000 ಕ್ಕೂ ಅಧಿಕ ಸದಸ್ಯರೊಂದಿಗೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಕ್ರೀಡಾಪಟುಗಳ ಜೀವನದಲ್ಲಿ ಕಾರ್ಯಬದ್ಧ ಒಕ್ಕೂಟವನ್ನು ನಿರ್ಮಿಸಿ, ಬೆಳೆಸಿ, ಮುನ್ನಡೆಸುವ ಗುರಿ ಇಟ್ಟುಕೊಂಡಿದೆ. UEA ಕ್ರಿಕೆಟ್, ಫುಟ್‌ಬಾಲ್, ವಾಲಿಬಾಲ್, ಕಬಡ್ಡಿ, ಶಟಲ್ ಬ್ಯಾಡ್ಮಿಂಟನ್, ಚೆಸ್, ಕ್ಯಾರಂ, ಟೇಬಲ್ ಟೆನ್ನಿಸ್, ಖೋ-ಖೋ, ತೋ ಬಾಲ್, ಕುಸ್ತಿ, ಕರಾಟೆ, ಜುಡೋ, ಮುಯ್ ತಾಯಿ, ಫೆನ್ಸಿಂಗ್, ಓಟ, ಜಂಪಿಂಗ್,) ಮುಂತಾದ ವಿವಿಧ ಕ್ರೀಡೆಗಳನ್ನು ಉತ್ತೇಜಿಸುತ್ತಿದೆ.

Leave a Reply

Your email address will not be published. Required fields are marked *