ಅರಂತೋಡು: ಚಾಲಕನ ನಿಯಂತ್ರಣ ತಪ್ಪಿ, ಕಾರೊಂದು ರಸ್ತೆ ಬದಿಯ ತಡೆ ಬೇಲಿಗೆ ಡಿಕ್ಕಿಯಾದ ಘಟನೆ ಅರಂತೋಡಿನಲ್ಲಿ ವರದಿಯಾಗಿದೆ.

ಕೇರಳ ನೊಂದಾವಣೆಯ ಕಾರು ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತಿದ್ದು, ಈ ಸಂದರ್ಭದಲ್ಲಿ ಕಾರು ಅರಂತೋಡು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಡೆಬೇಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *