ಸುಳ್ಯ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಸುಳ್ಯ ಕಡೆಯಿಂದ ಹಳೆಗೇಟು ಕಡೆಗೆ ಬರುತ್ತಿದ್ದ ಟ್ರ್ಯಾಕ್ಟರ್ ಹಾಗೂ ಸುಳ್ಯ ಕಡೆ ತೆರಳುತ್ತಿದ್ದ ಯಮಹ ಎಫ್.ಝೆಡ್ ಬೈಕ್ ನಡುವೆ ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬಳಿಯ ತಿರುವಿನಲ್ಲಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರನಿಗೆ ಏಟಾಗಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟು ಲಭಿಸಬೇಕಾಗಿದೆ
