ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ಸಯ್ಯದ್ ಮದನಿ ದರ್ಗಾ ಶರೀಫ್ ಗೆ ಕರ್ನಾಟಕ ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ಭೇಟಿ ನೀಡಿ ದರ್ಗಾ ಶರೀಫ್ ಗೆ ಚಾದರ ಸಮರ್ಪಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು
ದರ್ಗಾ ಶರೀಫ್ ಅಧ್ಯಕ್ಷರಾದ ಹನೀಫ ಹಾಜಿ ಮತ್ತು ಆಡಳಿತ ಮಂಡಳಿ ಸದಸ್ಯರು ಟಿ. ಎಂ. ಶಹೀದ್ ರವರನ್ನು ಬರಮಾಡಿ ಕೊಂಡರು. ದರ್ಗಾ ದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಟಿ. ಎಂ. ಶಹೀದ್ ಸರ್ವ ಧರ್ಮ ಸೌಹಾರ್ದ ಕೇಂದ್ರ ವಾದ ಉಳ್ಳಾಲ ದಲ್ಲಿ ಸ್ಪೀಕರ್ ಯು. ಟಿ. ಖಾದರ್ ರವರ ಮಾರ್ಗ ದರ್ಶನದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯ, ಗ್ರ್ಯಾಂಡ್ ಮಸ್ಜಿದ್ ನಿರ್ಮಾಣ ಜಿಲ್ಲೆಯನ್ನು ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತೆ ರೂಪು ಗೊಳ್ಳಲಿದೆ ಎಂದರು
ಈ ಸಂದರ್ಭದಲ್ಲಿ ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ, ಕನಕಮಜಲು ಜುಮ್ಮಾ ಮಸ್ಜಿದ್ ಕಾರ್ಯದರ್ಶಿ ಇಕ್ಬಾಲ್ ಸುಣ್ಣ ಮೂಲೆ, ದರ್ಗಾ ಸಮಿತಿ ಸದಸ್ಯರು ಮತ್ತು ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು


