ಕರ್ನಾಟಕ ಸರ್ಕಾರ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ರಾಗಿ ನೇಮಕಗೊಂಡು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿರುವ ಟಿ. ಎಂ. ಶಹೀದ್ ತೆಕ್ಕಿಲ್ ರವರಿಗೆ ಸುಳ್ಯ ಲಯನ್ಸ್ ಸೇವಾ ಸದನ ದಲ್ಲಿ ಅಕ್ಟೋಬರ್ 11 ಶನಿವಾರ ಸಂಜೆ 4 ಗಂಟೆಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ ಎಂದು ಅಭಿನಂದನಾ ಸಮಿತಿ ಪದಾಧಿಕಾರಿಗಳಾದ ಸದಾನಂದ ಮಾವಜಿ ಮತ್ತು ಕೆ. ಎಂ. ಮುಸ್ತಫ ತಿಳಿಸಿರುತ್ತಾರೆ
2023 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಇತ್ತೀಚೆಗೆ ರಾಜ್ಯ ಮಟ್ಟದ ನಿಗಮ, ಮಂಡಳಿ ಗಳಿಗೆ ಅಧ್ಯಕ್ಷರು ಗಳನ್ನು ನೇಮಕ ಮಾಡುವ ಸಂದರ್ಭದಲ್ಲಿ ಸುಳ್ಯಕ್ಕೆ ಪ್ರಾತಿನಿದ್ಯ ನೀಡಿರುವುದು ಸಂತಸ ತಂದಿದೆ, ಕರ್ನಾಟಕ ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಮಂಡಳಿ ಅಧ್ಯಕ್ಷರಾಗಿ ಟಿ. ಎಂ. ಶಹೀದ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದು , 11 ನೇ ತಾರೀಕು ಶನಿವಾರ ದಂದು ತಾಲೂಕಿನ ವಿವಿದೆಡೆ ಕಾರ್ಯಕ್ರಮ ಗಳಲ್ಲಿ ಭಾಗವಹಿಸಿ ಅದೇ ದಿನ ಸಂಜೆ 3 ಗಂಟೆಗೆ ಸುಳ್ಯಕ್ಕೆ ಆಗಮಿಸಿ ಲಯನ್ಸ್ ಸೇವಾಸದನ ದಲ್ಲಿ ಅಭಿನಂದನಾ ಸಮಿತಿ, ವಿವಿಧ ಕಾರ್ಮಿಕ ಸಂಘಟನೆಗಳು, ವಿವಿಧ ಸಂಘ ಸಂಸ್ಥೆ ಗಳು ಆಶ್ರಯ ದಲ್ಲಿ ಅಭಿನಂದನಾ ಕಾರ್ಯಕ್ರಮ ಜರಗಲಿದೆ ಎಂದು ಸಂಘಟಕರು ತಿಳಿಸಿರುತ್ತಾರೆ

Leave a Reply

Your email address will not be published. Required fields are marked *