ಎಸ್.ಡಿ.ಎಮ್ ಕಾಲೇಜು ಉಜಿರೆ: ಚಾಂಪಿಯನ್
ಆಳ್ವಾಸ್ ಕಾಲೇಜು ಮೂಡಬಿದಿರೆ: ರನ್ನರ್ ಅಪ್
ಎನ್.ಎಂ.ಸಿ, ನ. 6 ಮತ್ತು 7; ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಕೂಟವು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಮತ್ತು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ನವೆಂಬರ್ 6 ಮತ್ತು 7 ರಂದು ನಡೆಯಿತು.
ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ ವಿ ಚಿದಾನಂದರವರು ಸಭಾಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ಪರ್ಧಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾದ ನಿವೃತ್ತ ಸದಸ್ಯ ಮತ್ತು ಕೋಚ್ ಪಿ ವಿ ನಾರಾಯಣನ್ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿಸೋಜ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತ ಅಧಿಕಾರಿ ಜಗದೀಶ್ ಅಡ್ತಲೆ, ಎನ್.ಎಂ.ಸಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಕೆ ಟಿ ವಿಶ್ವನಾಥ್, ಕಾರ್ಯದರ್ಶಿ ಮಧುರ ಎಂ ಆರ್, ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯುಎಸಿ ಸಂಯೋಜಕ ಡಾ. ಮಮತಾ ಕೆ, ಕ್ರೀಡಾಕೂಟದ ಪರಿವೀಕ್ಷಕರಾದ ಡಾ. ಕೇಶವ್ ಮೂರ್ತಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ ಎಂ.ಎಂ ಸ್ವಾಗತಿಸಿ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಲೆಫ್ಟಿನೆಂಟ್ ಸೀತಾರಾಮ ಎಂ.ಡಿ ವಂದಿಸಿದರು.
ನವಂಬರ್ 7 ರಂದು ನಡೆದ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ.ರುದ್ರ ಕುಮಾರ್ ಎಂ.ಎಂ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆವಿಜಿ ಕಾನೂನು ಮಹಾವಿದ್ಯಾಲಯದ ಆಡಳಿತ ಅಧಿಕಾರಿ ಪ್ರೊ. ದಾಮೋದರ ಕೆ.ವಿ ಬಹುಮಾನ ವಿತರಿಸಿದರು.
ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ 23 ವಿವಿಧ ಕಾಲೇಜಿನ ತಂಡಗಳು ಭಾಗವಹಿಸಿದ ಈ ಪಂದ್ಯಕೂಟದಲ್ಲಿ ಎಸ್.ಡಿ.ಎಂ ಕಾಲೇಜು ಉಜಿರೆ ತಂಡ ಪ್ರಥಮ, ಆಳ್ವಾಸ್ ಕಾಲೇಜು ಮೂಡಬಿದಿರೆ ತಂಡ ದ್ವಿತೀಯ, ಮಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್ ತಂಡ ತೃತೀಯ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಚತುರ್ಥ ಪ್ರಶಸ್ತಿಗಳನ್ನು ಪಡೆದುಕೊಂಡಿತು. ಕಾರ್ಯಕ್ರಮವನ್ನು ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ಭವ್ಯ ಪಿ ಎಂ ನಿರೂಪಿಸಿ ನಿರ್ವಹಿಸಿದರು.
ಈ ಪಂದ್ಯಾಕೂಟದ ಯಶಸ್ಸಿಗೆ ವಿವಿಧ ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕರು, ಎನ್.ಎಂ.ಸಿ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು, ಕಾಲೇಜಿನ ಉಪನ್ಯಾಸಕ ವೃಂದ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ಎನ್.ಸಿ.ಸಿ, ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಹಾಗೂ ಹಲವು ಕ್ರೀಡಾ ಅಭಿಮಾನಿಗಳು ಸಹಕರಿಸಿದರು.



