ಸೂಪರ್ ಸ್ಟಾರ್ ನಟಿ ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ಸರ್ಪಸಂಸ್ಕಾರ ಪೂಜೆ ನೆರವೇರಿಸಿದ್ದಾರೆ. ಬಹುಭಾಷಾ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ದಕ್ಷಿಣಭಾರತದ ಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೆ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆಯನ್ನು ನಯನತಾರಾ ದಂಪತಿ ನೆರವೇರಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ನಯನ ತಾರಾ ದಂಪತಿಗಳಿಗೆ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು ಶಾಲು ಹೊದಿಸಿ ಗೌರವ ಸಲ್ಲಿಸಿದ್ದಾರೆ.




