
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರಾದ ಕಾರಣ, ಬುಧವಾರ ಅವರು ಸದನ ಕಲಾಪಗಳಿಂದ ದೂರ ಉಳಿದರು. ನಗರದ ಪ್ರವಾಸಿ ಮಂದಿರದಲ್ಲೇ ಇಡೀ ದಿನ ವಿಶ್ರಾಂತಿ ಪಡೆದರು.
‘ನ್ಯಾಷನಲ್ ಹೆರಾಲ್ಡ್’ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ತೀರ್ಪನ್ನು ಬೆಂಬಲಿಸಿ, ಕೇಂದ್ರ ಸರ್ಕಾರ ಸುಳ್ಳು ಪ್ರಕರಣ ದಾಖಲಿಸಿದ್ದನ್ನು ಖಂಡಿಸಿ ಸುವರ್ಣ ವಿಧಾನಸೌಧದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಂಡರು. ಒಂದು ತಾಸು ಧರಣಿ ಕುಳಿತರು. ಸದನದೊಳಗೆ ಹೋದ ಅವರು, ಕೆಲ ಸಮಯದ ನಂತರ ಪ್ರವಾಸಿ ಮಂದಿರಕ್ಕೆ ಮರಳಿದರು.
ಮಾಜಿ ಸಚಿವ ರಮೇಶ್ ಜಾರಕಿಹೊಳಿ , ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಸಚಿವ ಭೈರತಿ ಸುರೇಶ್ ಹಾಗೂ ಪುತ್ರ ಯತೀಂದ್ರ, ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ.
