ಕರ್ನಾಟಕ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಪುರಸ್ಕೃತ ದ. ಕ. ಮತ್ತು ಉಡುಪಿ ಜಿಲ್ಲೆಗಳ ಜಮೀಯ್ಯತ್ತ್ತುಲ್ ಫಲಾಹ್ ಇದರ ಸುಳ್ಯ ತಾಲೂಕು ಘಟಕ ದ ವತಿಯಿಂದ ಕರ್ನಾಟಕ ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ ಕರ್ನಾಟಕ ಸರ್ಕಾರದಿಂದ ನೇಮಕಗೊಂಡ ಟಿ. ಎಂ. ಶಹೀದ್, ಸುಳ್ಯದ ಪ್ರಥಮ ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರ ( ಸೂಡ ) ಇದರ ಪ್ರಥಮ ಅಧ್ಯಕ್ಷರಾಗಿ ನೇಮಕ ಗೊಂಡ ಕೆ. ಎಂ. ಮುಸ್ತಫ ಮತ್ತು ಸುಳ್ಯದಲ್ಲಿ ಕಾನೂನು ಸುವ್ಯವಸ್ಥೆ ಯಲ್ಲಿ ಕಾರ್ಯದಕ್ಷತೆಯಿಂದ ಕಾರ್ಯ ನಿರ್ವಹಿಸಿ ಸಾರ್ವಜನಿಕರಲ್ಲಿ ಮಾದಕ ದ್ರವ್ಯ ವಿರೋಧಿ ಜನ ಜಾಗೃತಿ ಮೂಡಿಸಿದ ಸುಳ್ಯ ಪೊಲೀಸ್ ವೃತ್ತ ನಿರೀಕ್ಷರಾದ ತಿಮ್ಮಪ್ಪ ನಾಯ್ಕ್ ಇವರುಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ. ಎಸ್. ಮಹಮ್ಮದ್, ಸಂಸ್ಥೆ ಯ ಅಧ್ಯಕ್ಷ ಮೂಸ ಕುoಞ ಪೈoಬಚಾಲ್, ಅನ್ಸಾರಿಯ ಅಧ್ಯಕ್ಷ ಹಾಜಿ ಅಬ್ದುಲ್ ಮಜೀದ್ ಜನತಾ, ಪದಾಧಿಕಾರಿಗಳಾದ ಶಾಫಿ ಕುತ್ತಾಮೊಟ್ಟೆ, ಹಸೈನಾರ್ ವಳಲoಬೆ, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *