ಸುಳ್ಯ: ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆ ಮತ್ತು ಈ ಬಗ್ಗೆ ಸಾರಿಗೆ ಇಲಾಖೆಯ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸುಳ್ಯ ಘಟಕದ ವತಿಯಿಂದ ನಾಳೆ (ಜನವರಿ 03, ಶನಿವಾರ) ಬೆಳಿಗ್ಗೆ 9:00 ಗಂಟೆಗೆ ಸುಳ್ಯದಲ್ಲಿ ಪ್ರತಿಭಟನೆ ನಡೆಯಲಿದೆ.

ಸರಿಯಾದ ಸಮಯಕ್ಕೆ ಬಸ್ಗಳಿಲ್ಲದೆ ವಿದ್ಯಾರ್ಥಿಗಳು ಕಾಲೇಜಿಗೆ ತೆರಳಲು ಪರದಾಡುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ವಿದ್ಯಾರ್ಥಿಗಳಿಗೆ ಅಗತ್ಯ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಬಿವಿಪಿ ಪ್ರಕಟಣೆ ತಿಳಿಸಿದೆ.



