ಸುಳ್ಯ: ಇಲ್ಲಿನ ಪೈಚಾರ್ (Paichar) ಬಳಿ ಇಂದು ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಬಸ್ ನಿಲ್ದಾಣಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್ಸಿಗಾಗಿ ಕಾಯುತ್ತಿದ್ದ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ತಂಗುದಾಣದ ಜಖಂಗೊಂಡಿದೆ.


ತಕ್ಷಣ ಘಟನಾಸ್ಥಳಕ್ಕೆ ಆಗಮಿಸಿದ ಜಾಲ್ಸೂರು ಗ್ರಾಮ ಪಂಚಾಯತ್ ಸದಸ್ಯ ಮುಜೀಬ್ ರವರು ಇದರ ಬಗ್ಗೆ ಪಂಚಾಯತ್’ಗೆ ತಿಳಿಸಿದ್ದಾರೆ.


