ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಬಳಿ ಚಲಿಸುತ್ತಿದ್ದ ಲಾರಿಯೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಇಂದು (ಜ.9) ಬೆಳಿಗ್ಗೆ ಸಂಭವಿಸಿದೆ.

​ಮಂಗಳೂರಿನಿಂದ ಮಡಿಕೇರಿ ಕಡೆಗೆ ಮರದ ಪ್ಲೈವುಡ್ (Plywood) ಕಚ್ಚಾವಸ್ತುವನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಬೆಂಕಿ ಕಾಣಿಸಿಕೊಂಡ ಕೂಡಲೇ ಚಾಲಕ ಲಾರಿಯಿಂದ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯ ಬಗ್ಗೆ ಸ್ಥಳೀಯರು ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಆದರೂ ಬೆಂಕಿಯ ತೀವ್ರತೆಗೆ ಲಾರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *