ಸುಳ್ಯ: ಮೈಸೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ಪೈಚಾರ್ ಶಾಂತಿನಗರದ ತಿರುವಿನ ಬಳಿ ನಡೆದಿದೆ.

ಪೈಚಾರಿನಿಂದ ಸುಳ್ಯದ ಕಡೆಗೆ ಆಟೋ ರಿಕ್ಷಾ ಸಂಚರಿಸುತ್ತಿತ್ತು. ಇದೇ ವೇಳೆ ವಿರುದ್ಧ ದಿಕ್ಕಿನಿಂದ ಅಂದರೆ ಮೈಸೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು, ಶಾಂತಿನಗರದ ತಿರುವಿನ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ರಭಸದಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಕಾರಿನ ಮುಂಭಾಗದ ಟಯರ್ ಒಡೆದು ಹೋಗಿವೆ , ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಇತ್ತ ಆಟೋ ರಿಕ್ಷಾದ ಟಯರ್ ಹಾಗೂ ರಿಕ್ಷಾಕ್ಕೂ ಹಾನಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.



