ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರರು, ಮಾಜಿ ಸಾರಿಗೆ ಸಚಿವರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಭೀಮಣ್ಣ ಖಂಡ್ರೆ ಅವರ ನಿಧನದ ಕುರಿತು ಶೋಕ ಸಂದೇಶ ನೀಡಿರುವ ಅವರು, “ಖಂಡ್ರೆ ಅವರು ಕೇವಲ ರಾಜಕೀಯ ನಾಯಕರಷ್ಟೇ ಅಲ್ಲದೆ, ಸ್ವಾತಂತ್ರ್ಯ ಹೋರಾಟಗಾರರಾಗಿ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಹಾಗೂ ಶಿಕ್ಷಣ ಸಂಸ್ಥೆಗಳ ಸ್ಥಾಪಕರಾಗಿ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ಅವರ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ,” ಎಂದು ಸ್ಮರಿಸಿದ್ದಾರೆ.
ರಾಜ್ಯದ ಅಭಿವೃದ್ಧಿಗೆ ಖಂಡ್ರೆಯವರು ನೀಡಿದ ಸೇವೆ ಅಪಾರವಾದುದು ಎಂದು ಬಣ್ಣಿಸಿರುವ ಶಾಹಿದ್ ತೆಕ್ಕಿಲ್ ಅವರು, “ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಭಗವಂತನು ಅವರ ಕುಟುಂಬದವರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ,” ಎಂದು ಪ್ರಾರ್ಥಿಸಿದ್ದಾರೆ.







