ಕಾಸರಗೋಡು ಜಿಲ್ಲೆಯ ಚಟ್ಟಂಚಾಲ್ ತೆಕ್ಕಿಲ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.

ಯುವಕರು ಪ್ರಯಾಣಿಸುತ್ತಿದ್ದ BMW ಕಾರು ಮತ್ತು ಲಾರಿ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಮೃತರನ್ನು ದ.ಕ. ಜಿಲ್ಲೆಯ ಸಜಿಪ ಬೈಲಗುತ್ತು ನಿವಾಸಿ ದಿ.ಎಸ್.ಬಿ.ಮುಹಮ್ಮದ್ ಎಂಬವರ ಪುತ್ರ ಆಸಿಫ್ ಮುಹಮ್ಮದ್(41) ಮತ್ತು ನಾಟೆಕಲ್ ನಿವಾಸಿ ಅಬ್ಬಾಸ್ ಹಾಜಿ ಎಂಬವರ ಪುತ್ರ ಮುಹಮ್ಮದ್ ಶಫೀಕ್(23) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ವಯನಾಡಿಗೆ ತೆರಳಿದ್ದ ಐವರು ಗೆಳೆಯರು, ಸೋಮವಾರ ರಾತ್ರಿ ಊರಿಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರು ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯು ಕಾರು ಚಟ್ಟಂಚಾಲ್ ತೆಕ್ಕಿಲ್ ಎಂಬಲ್ಲಿಗೆ ತಲುಪಿದಾಗ ಲಾರಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
