ಸಂಪಾಜೆ: ಇಲ್ಲಿನ ಗೂನಡ್ಕ ದರ್ಕಾಸ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಮಂಡಳಿಯ ಅಧ್ಯಕ್ಷರು ಹಾಗೂ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹೊಂದಿರುವ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಇಂದು ವೀಕ್ಷಿಸಿದರು.

ಒಟ್ಟು 70 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದರಲ್ಲಿ 50 ಲಕ್ಷ ರೂಪಾಯಿ ಅನುದಾನವು ಟಿ.ಎಂ. ಶಾಹಿದ್ ತೆಕ್ಕಿಲ್ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳಿಂದ ಬಿಡುಗಡೆಯಾಗಿದೆ. ಉಳಿದ 20 ಲಕ್ಷ ರೂಪಾಯಿ ಅನುದಾನವು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರ ಶಿಫಾರಸ್ಸಿನ ಮೇರೆಗೆ ಮಂಜೂರಾಗಿದೆ.
ಊರಿನ ಜನರಿಗೆ ಇದೊಂದು ಬಹುಪಯೋಗಿ ರಸ್ತೆಯಾಗಿದ್ದು, ದೀರ್ಘಕಾಲದ ಬೇಡಿಕೆ ಈಡೇರಿರುವುದಕ್ಕೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಅಭಿವೃದ್ಧಿ ಕಾರ್ಯಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಟಿ.ಎಂ. ಶಾಹಿದ್ ತೆಕ್ಕಿಲ್ ಅವರಿಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿ ಅಭಿನಂದಿಸಿದ್ದಾರೆ.
ಉಪಸ್ಥಿತರಿದ್ದ ಗಣ್ಯರು:
ರಸ್ತೆ ವೀಕ್ಷಣಾ ಸಂದರ್ಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್.ಕೆ. ಹನೀಫ್, ಸದಸ್ಯರಾದ ಜಿ.ಕೆ. ಹಮೀದ್ ಗೂನಡ್ಕ, ಅಬೂಸಾಲಿ ಗೂನಡ್ಕ, ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಮೊಹಮದ್ ಕುಂಞಿ ಗೂನಡ್ಕ, ಉಮ್ಮರ್ ಪುತ್ರಿಕಾರ್ಸ್, ಗಣಪತಿ ಭಟ್, ಮುನೀರ್ ಧಾರಿಮಿ, ಕೊಪ್ಪತಕಜೆ ಅಬ್ದುಲ್ಲ, ಸತ್ಯನಾರಾಯಣ ಭಟ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
