ಸುಳ್ಯ: ಕರ್ನಾಟಕ ರಾಜ್ಯ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು (ಸಚಿವರ ಸ್ಥಾನಮಾನ) ಆದ ಜನಾಬ್ ಟಿ.ಎಂ.ಶಾಹಿದ್ ತೆಕ್ಕಿಲ್ ಅವರು ಜನವರಿ 30 ಮತ್ತು 31 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

​ತಮ್ಮ ಪ್ರವಾಸದ ಅಂಗವಾಗಿ ಜನವರಿ 30 ರಂದು ಶುಕ್ರವಾರ ಬೆಳಿಗ್ಗೆ 10:30ಕ್ಕೆ ಬೆಂಗಳೂರಿನ ಸರ್ ಪುಟ್ಟಣ್ಣಚೆಟ್ಟಿ ಟೌನ್ ಹಾಲ್ ನಲ್ಲಿ ನಡೆಯುವ ಜನಮುಖಿ ಶೋಷಿತ ವೇದಿಕೆ ವತಿಯಿಂದ ಆಯೋಜಿಸಲಾದ ಶತಮಾನೋತ್ಸವ ಮತ್ತು ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

​ಬಳಿಕ ಮಧ್ಯಾಹ್ನ 2:00 ಗಂಟೆಗೆ ಬೆಂಗಳೂರಿನಿಂದ ಹೊರಟು, ರಾತ್ರಿ 7:00 ಗಂಟೆಗೆ ಸುಳ್ಯ ತಾಲೂಕಿನ ಎಣ್ಮೂರು (ಎಲಿಮಲೆ) ತಲುಪಲಿದ್ದಾರೆ. ಅಲ್ಲಿ ನಡೆಯಲಿರುವ ಎಲಿಮಲೆ ನುಸ್ರತುಲ್ ಇಸ್ಲಾಂ ಅಸೋಸಿಯೇಷನ್ ಇದರ 42ನೇ ವಾರ್ಷಿಕ ಸಭೆಯಲ್ಲಿ ಮತ್ತು ಮಹಾಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

​ಮಾರನೇ ದಿನ, ಜನವರಿ 31 ರಂದು ಬೆಳಿಗ್ಗೆ 11:00 ಗಂಟೆಗೆ ಪುತ್ತೂರಿನ ಆನೆಮಜಲಿನಲ್ಲಿ ನೂತನವಾಗಿ ನಿರ್ಮಿಸಿರುವ ನ್ಯಾಯಾಲಯ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಹಾಗೂ ಇತರ ಸ್ಥಳೀಯ ಕಾರ್ಯಕ್ರಮಗಳಲ್ಲಿ ಶಾಹಿದ್ ತೆಕ್ಕಿಲ್ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *