ಸುಳ್ಯ: ಇಲ್ಲಿನ ಮೊಗರ್ಪನೆ ತಿರುವಿನಲ್ಲಿ ಇಂದು ಬೆಳ್ಳಂಬೆಳಿಗ್ಗೆ ಮಹೀಂದ್ರಾ ಥಾರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಬೆಂಗಳೂರಿನಿಂದ, ಮುಳ್ಳೇರಿಯ ಕಡೆ ತೆರಳುತ್ತಿದ್ದ ವೇಳೆ ಚಾಲಕನಿಗೆ ನಿದ್ದೆಯ ಮಂಪರಿನಿಂದ, ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ವಾಹನವು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ್ದು, ಇದರ ಪರಿಣಾಮವಾಗಿ ಕಾರು ಜಖಂಗೊಂಡಿದೆ.

ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *