ಪುತ್ತೂರು: ನಾಡು-ನುಡಿ ಹಾಗೂ ಸರಕಾರಿ ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ರಾಜ್ಯಾದ್ಯಂತ ನಡೆಯುತ್ತಿರುವ `ಕನ್ನಡ ಶಾಲೆ ಉಳಿಸಿ ಬೆಳೆಸಿ’ ಅಭಿಯಾನದ ಕರ್ನಾಟಕ ರಾಜ್ಯ ಮಾಧ್ಯಮ ವಕ್ತಾರರಾಗಿ ಪುತ್ತೂರಿನ ಪತ್ರಕರ್ತ ಯೂಸುಫ್ ರೆಂಜಲಾಡಿಯವರನ್ನು ನೇಮಕಗೊಳಿಸಿದ್ದಾರೆ.
ಪತ್ರಿಕೋಧ್ಯಮದ ಜೊತೆಗೆ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಯೂಸುಫ್ ರೆಂಜಲಾಡಿಯವರು ಕಳೆದ 12 ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2 ಅವಧಿಗೆ ಕರ್ನಾಟಕ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ರೆಂಜಲಾಡಿ ಕೆವೈಎಂಎ ಅಧ್ಯಕ್ಷರಾಗಿ, ಸರ್ವೆ ಸೌಹಾರ್ದ ವೇದಿಕೆ ನಿರ್ದೇಶಕರಾಗಿ, ಸಂಯುಕ್ತ ಜಮಾಅತ್ ತಾಲೂಕು ಮಾಧ್ಯಮ ಕಾರ್ಯದರ್ಶಿಯಾಗಿ ಹೀಗೆ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ. ಇವರು ಪುತ್ತೂರು ತಾಲೂಕಿನಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಅನೇಕ ಸರಕಾರಿ ಶಾಲೆಗಳ ಬಗ್ಗೆ ಪರಿಣಾಮಕಾರಿ ವರದಿ ಪ್ರಕಟಿಸುವ ಮೂಲಕ ಸಂಬಂಧಪಟ್ಟವರ ಗಮನ ಸೆಳೆದಿದ್ದಲ್ಲದೇ ಶಾಲೆಗಳ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದ್ದಾರೆ.

Leave a Reply

Your email address will not be published. Required fields are marked *