ಮಡಿಕೇರಿ: ಎಸ್‌ಡಿಪಿಐ (SDPI) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಪ್ರಯಾಣಿಸುತ್ತಿದ್ದ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಶನಿವಾರ ನಡೆದಿದೆ.

ಅಬ್ದುಲ್ ಮಜೀದ್ ಅವರು ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಸಂಪೂರ್ಣ ವಾಹನ ಸುಟ್ಟು ಕರಕಲಾಗಿದೆ. ಆದರೂ, ಕಾರಿನಲ್ಲಿದ್ದ ಅಬ್ದುಲ್ ಮಜೀದ್ ಹಾಗೂ ಅವರ ಚಾಲಕ ಸಮಯ ಪ್ರಜ್ಞೆಯಿಂದ ಹೊರಬಂದಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

​ಘಟನಾ ಸ್ಥಳದ ದೃಶ್ಯಗಳಲ್ಲಿ ಕಾರು ರಸ್ತೆ ಬದಿಯಲ್ಲಿ ಹೊತ್ತಿ ಉರಿಯುತ್ತಿರುವುದು ಕಂಡುಬಂದಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *