ಕನಕಮಜಲು: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನ’ವನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಅಧ್ಯಕ್ಷರಾದ ಕೆ. ಎಂ. ಅಬ್ದುಲ್ ಹಮೀದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಕೋರಿದರು.
ವಿಜ್ಞಾನ ದಿನದ ಅಂಗವಾಗಿ ವಿದ್ಯಾರ್ಥಿಗಳು ರಚಿಸಿದ ಆಕರ್ಷಕ ‘ಜ್ವಾಲಾಮುಖಿ ಬೆಟ್ಟದ ಮಾದರಿ’ ಹಾಗೂ ಸುಮಾರು 15ಕ್ಕೂ ಹೆಚ್ಚು ವಿವಿಧ ವಿಜ್ಞಾನ ಪ್ರಯೋಗಗಳನ್ನು ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳ ಈ ವೈಜ್ಞಾನಿಕ ಪ್ರತಿಭೆ ಮತ್ತು ಪ್ರಾಯೋಗಿಕ ಜ್ಞಾನ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಶಾಲೆಯ ಮುಖ್ಯೋಪಾಧ್ಯಾಯಿನಿ ಶೇಷಮ್ಮ ಹಾಗೂ ಶಿಕ್ಷಕರಾದ ನಟೇಶ್ ಅವರು ಈ ವಿಜ್ಞಾನ ಕಾರ್ಯಕ್ರಮದ ಮಾರ್ಗದರ್ಶನ ಮಾಡಿ, ಅಚ್ಚುಕಟ್ಟಾಗಿ ನಡೆಸಿಕೊಟ್ಟರು.
ಎಸ್‌ಡಿಎಂಸಿ (SDMC) ಮಾಸಿಕ ಸಭೆ:
ಕಾರ್ಯಕ್ರಮದ ಬಳಿಕ ಶಾಲೆಯ ಎಸ್‌ಡಿಎಂಸಿ ಮಾಸಿಕ ಸಭೆಯು ನಡೆಯಿತು. ಈ ಸಭೆಯಲ್ಲಿ ಒಟ್ಟು 16 ಮಂದಿ ಸದಸ್ಯರು ಸಕ್ರಿಯವಾಗಿ ಭಾಗವಹಿಸಿ, ಶಾಲೆಯ ಶೈಕ್ಷಣಿಕ ಅಭಿವೃದ್ಧಿ ಹಾಗೂ ಮುಂದಿನ ಯೋಜನೆಗಳ ಕುರಿತು ಚರ್ಚೆ ನಡೆಸಿದರು.




