
ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು ಕಾಲೇಜು ಸಂಸ್ಥೆಗೆ ಹೆಮ್ಮೆಯ ಸಂಭ್ರಮ, ಬಾರಕಾ ಡಿಗ್ರಿ ಕಾಲೇಜಿನ ವಿದ್ಯಾರ್ಥಿನಿ ಆಯಿಶಾ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಎ. ಧಾರೆಯಲ್ಲಿ 5ನೇ ರ್ಯಾಂಕ್ ಪಡೆದಿದ್ದಾರೆ. ಇವರು ಅಶ್ರಫ್ ಅಲಿ ಮತ್ತು ರಮ್ಲತ್ ದಂಪತಿಗಳ ಪುತ್ರಿ ಆಗಿದ್ದು, ಅಲ್ತಾಫ್ ಉಮರ್ ಅವರನ್ನು ವಿವಾಹವಾಗಿದ್ದಾರೆ. ಪ್ರಸ್ತುತ ಇವರು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಅಧ್ಯಯನ ಮಾಡುತ್ತಿದ್ದಾರೆ.
ಬಾರಕಾ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ನಿರಂತರ ಅದ್ಭುತ ಸಾಧನೆಗಳನ್ನು ಮಾಡುತ್ತಾ ಬಂದಿದೆ.
ಅಡ್ಯಾರ್ನಲ್ಲಿರುವ ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು ಕಾಲೇಜು ಪ್ರಿ-ಕೆಜಿ ಯಿಂದ ಡಿಗ್ರಿ ಮಟ್ಟದವರೆಗೆ ಶಿಕ್ಷಣವನ್ನು ನೀಡುತ್ತಿದ್ದು, ಇದರ ವಿದ್ಯಾರ್ಥಿಗಳು ಪ್ರತಿ ವರ್ಷವೂ ಶೈಕ್ಷಣಿಕ ಹಾಗೂ ಇತರ ವಿಷಯಗಳಲ್ಲಿ ಸಾಧನೆ ಮಾಡುತ್ತಾ ಬಂದಿದ್ದಾರೆ .
ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ತಂಡದ ಸದಸ್ಯರು ವಿದ್ಯಾರ್ಥಿನಿ ಆಯಿಶಾ ಅವರ ಮನೆಗೆ ಭೇಟಿ ನೀಡಿ ಸನ್ಮಾನ ಮಾಡಿದರು. ಈ ಅತ್ಯುತ್ತಮ ಸಾಧನೆಗಾಗಿ ಅಭಿನಂದಿಸಿ, ಭವಿಷ್ಯದ ಶೈಕ್ಷಣಿಕ ಪಯಣದಲ್ಲಿ ಮತ್ತಷ್ಟು ಯಶಸ್ಸು ಸಿಗಲಿ ಎಂದು ಹಾರೈಸಿದರು.




