
ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಒಂದು ದಿನದ ವಿಜ್ಞಾನ ಮಾದರಿ ರಚನೆ ಸ್ಪರ್ಧೆಯು ವಿಜ್ಞಾನ ಸಂಘದ ವತಿಯಿಂದ ನಡೆಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರ ಕುಮಾರ್ ಎಂ. ಎಂ ಮಾತನಾಡಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ರಚನಾತ್ಮಕತೆಯನ್ನು ಮೂಡಿಸುವಲ್ಲಿ ಈ ಕಾರ್ಯಕ್ರಮ ಸಹಕಾರಿ ಎಂದರು. ಕಾಲೇಜು ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯುಎಸಿ ಸಂಯೋಜಕಿ ಡಾ. ಮಮತಾ ಕೆ, ವಿಜ್ಞಾನ ವಿಭಾಗದ ಸಂಯೋಜಕರಾದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸತ್ಯಪ್ರಕಾಶ್ ಡಿ, ವಿಜ್ಞಾನ ಸಂಘದ ಸಂಯೋಜಕ ಅಶ್ವಿನಿ ಕೆ.ಸಿ ಮತ್ತು ವಿಜ್ಞಾನ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಲೇಜಿನ ವಿಜ್ಞಾನ ವಿಭಾಗದ ಪ್ರಯೋಗಾಲಯಗಳಲ್ಲಿ ನಡೆದ ಮಾದರಿ ಸ್ಪರ್ಧೆಯಲ್ಲಿ ಹಲವಾರು ರಚನಾತ್ಮಕ ಮಾದರಿಗಳು ಮೂಡಿಬಂದವು. ಕಾಲೇಜಿನ ಎಲ್ಲ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಬೋಧಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಸಹಕರಿಸಿದರು.




