ಸುಳ್ಯ (ಮಾ. 14): ಸುಳ್ಯದ ಶ್ರೀರಾಂಪೇಟೆಯಲ್ಲಿರುವ ರಾಜೇಶ್ ಬಾರ್ ಎದುರುಗಡೆ ನಿಂತಿದ್ದ ಯುವಕನಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಘಟನೆ ಶನಿವಾರ ವರದಿಯಾಗಿದೆ.

​ಚೂರಿ ಇರಿತಕ್ಕೊಳಗಾದ ಯುವಕನನ್ನು ಸುಳ್ಯದ ಬೀರಮಂಗಲ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಹರೀಶ್ ಜೊತೆಗಿದ್ದ ನೀತು ಎಂಬವರಿಗೂ ಗಾಯಗಳಾಗಿವೆ. ಇವರಿಬ್ಬರಿಗೂ ಪ್ರಸ್ತುತ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

​ಕೃತ್ಯವೆಸಗಿದವರು ಕಾಂತಮಂಗಲದವರೆಂದು ಹೇಳಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *