ಅಬುಧಾಬಿ: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಉಲ್ಬಣಗೊಂಡಿರುವ ಬೆನ್ನಲ್ಲೇ, ಕೃತಕ ಬುದ್ಧಿಮತ್ತೆ (AI) ಬಳಸಿಕೊಂಡು ತಿರುಚಲಾದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ 19 ಮಂದಿ ಭಾರತೀಯರು ಸೇರಿದಂತೆ ಒಟ್ಟು 35 ಜನರ ಬಂಧನಕ್ಕೆ ಯುಎಇ ಸರ್ಕಾರ ಆದೇಶ ಹೊರಡಿಸಿದೆ.

ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿರುವ ಮತ್ತು ಯುಎಇ ಮೇಲೆ ಇರಾನ್ ದಾಳಿ ಮುಂದುವರಿದಿರುವ ಈ ಸೂಕ್ಷ್ಮ ಸಂದರ್ಭದಲ್ಲಿ, ನಕಲಿ ಹಾಗೂ ತಿರುಚಿದ ವಿಡಿಯೋಗಳನ್ನು ಹರಡಿ ತಪ್ಪು ಮಾಹಿತಿ ಪಸರಿಸುವವರ ವಿರುದ್ಧ ಯುಎಇ ಆಡಳಿತವು ಈ ಕಠಿಣ ಕ್ರಮ ಕೈಗೊಂಡಿದೆ.





