ಪೈಚಾರ್ (ಸುಳ್ಯ):  ಈದ್-ಉಲ್-ಫಿತರ್ (ರಂಜಾನ್) ಹಬ್ಬವನ್ನು ಪೈಚಾರ್‌ನ ಬದ್ರಿಯಾ ಜುಮಾ ಮಸೀದಿಯಲ್ಲಿ ಅತ್ಯಂತ ಭಕ್ತಿ ಮತ್ತು ಸಡಗರದಿಂದ ಆಚರಿಸಲಾಯಿತು. ಮುಂಜಾನೆ ನೂರಾರು ಮುಸ್ಲಿಂ ಬಾಂಧವರು ಒಂದೆಡೆ ಸೇರಿ ವಿಶೇಷ ಈದ್ ನಮಾಜ್ (ಪ್ರಾರ್ಥನೆ) ಸಲ್ಲಿಸುವ ಮೂಲಕ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರು.

ಈ ಪವಿತ್ರ ಸಂದರ್ಭದಲ್ಲಿ ಖ್ಯಾತ ವಿದ್ವಾಂಸರಾದ ಶಮೀರ್ ನಈಮಿ ಅವರು ಸಮುದಾಯವನ್ನು ಉದ್ದೇಶಿಸಿ ವಿಶೇಷ ಪ್ರವಚನ ನೀಡಿದರು.ಪ್ರಾರ್ಥನೆ ಮತ್ತು ಪ್ರವಚನದ ಬಳಿಕ, ಮಸೀದಿಯ ಆವರಣದಲ್ಲಿ ಸೇರಿದ ಸಮಸ್ತರು ಪರಸ್ಪರ ಆಲಿಂಗನ ಮಾಡಿಕೊಂಡು ‘ಈದ್ ಮುಬಾರಕ್’ ಎಂದು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಬದ್ರಿಯಾ ಜುಮಾ ಮಸೀದಿಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಯುವಕರು ಹಾಗೂ ಅಪಾರ ಸಂಖ್ಯೆಯಲ್ಲಿ ಜಮಾಅತ್ ಬಾಂಧವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *