ಪಯ್ಯೋಳಿ (ಕೇರಳ): ಕೋಯಿಲಾಂಡಿ ಕ್ಷೇತ್ರದ ಅಭ್ಯರ್ಥಿ ನ್ಯಾಯವಾದಿ ಪ್ರವೀಣ್ ಕುಮಾರ್ ಅವರ ಪರವಾಗಿ ಪಯ್ಯೋಳಿಯಲ್ಲಿ ಐಎನ್‌ಟಿಯುಸಿ (INTUC) ವತಿಯಿಂದ ವಿಶೇಷ ಚುನಾವಣಾ ಪ್ರಚಾರ ಸಭೆಯನ್ನು ಆಯೋಜಿಸಲಾಗಿತ್ತು.

​ಈ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಅಭ್ಯರ್ಥಿ ಪ್ರವೀಣ್ ಕುಮಾರ್ ಅವರ ಗೆಲುವನ್ನು ಖಚಿತಪಡಿಸಿಕೊಳ್ಳಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ನಾಯಕರು ಹಾಗೂ ಕಾರ್ಯಕರ್ತರಿಗೆ ಮಹತ್ವದ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.

​ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮನೋಜ್ ಎಡಾನಿ ಸೇರಿದಂತೆ ಹಲವು ಪ್ರಮುಖ ನಾಯಕರು, ಕಾರ್ಯಕರ್ತರು ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *