ಸುಳ್ಯ: ಮೆಸ್ಕಾಂ ಸುಳ್ಯ ಉಪವಿಭಾಗದ ವ್ಯಾಪ್ತಿಗೆ ಒಳಪಡುವ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 7ರ ಮಂಗಳವಾರದಂದು ತಾಲೂಕಿನ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಾದ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಲೆ ಡಿಪೋ, ಸಂಪಾಜೆ, ಕೊಲ್ಚಾರ್, ಕಾವು, ಅಜ್ಜಾವರ, ಕೇನ್ಯ ಆರಂತೋಡು ಮತ್ತು ಮಂಡೆಕೋಲು ಪ್ರದೇಶಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ಕಡಿತಗೊಳಿಸಲಾಗುವುದು ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಸಾರ್ವಜನಿಕರು ಹಾಗೂ ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸುವಂತೆ ವಿನಂತಿಸಲಾಗಿದೆ.





