ಸುಳ್ಯ ಅರಂತೋಡು ಜಮಾತ್ ಹಾಗೂ ಪಟೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲು ಹೊದಿಸಿ ಗೌರವ:
ದುಬೈ, ಏಪ್ರಿಲ್ 18: ವಿವಿಧ ಕಾರ್ಯಕ್ರಮದ ನಿಮಿತ್ತ ದುಬೈಗೆ ಆಗಮಿಸಿದ ಕರ್ನಾಟಕದ ಪ್ರಮುಖ ಕಾಂಗ್ರೆಸ್ ನಾಯಕರು ಹಾಗೂ ಖ್ಯಾತ ಸಮಾಜ ಸೇವಕರಾದ ಟಿ ಎಂ ಶಾಹಿದ್ ಅವರಿಗೆ ಇಲ್ಲಿನ ಮುತೀನ ಪ್ರದೇಶದಲ್ಲಿ ಆತ್ಮೀಯ ಹಾಗೂ ಗೌರವಯುತ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಟಿ ಎಂ ಶಾಹಿದ್ ತೆಕ್ಕಿಲ್ ಅವರ ರಾಜಕೀಯ ,ಶೈಕ್ಷಣಿಕ,ಆಡಳಿತ ಹಾಗೂ ಸಾಮಾಜಿಕ ಸೇವೆಯನ್ನು ಕೊಂಡಾಡಿ ಕರ್ನಾಟಕದಲ್ಲಿ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿರುವ ಟಿ ಎಂ ಶಾಹಿದ್ ತೆಕ್ಕಿಲ್ ಅವರ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.
ಅರಂತೋಡು ಜಮಾತ್ ಅಧ್ಯಕ್ಷರಾದ ಮುಕ್ತಾರ್ ಪಟೇಲ್ ಅವರು ಶಾಲು ಹೊದಿಸಿ ಟಿ ಎಂ ಶಾಹಿದ್ ತೆಕ್ಕಿಲ್ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದವರು, ಅವರ ನಾಯಕತ್ವ, ಸರಳತೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಪ್ರಶಂಸಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆಗಳನ್ನು ಮಾಡುವಂತೆ ಆಗಲಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಜಮಾತ್ ಸದಸ್ಯರಾದ ನಾಸಿರುದ್ದೀನ್ ಪಟೇಲ್, ಸರ್ಫರಾಜ್ ಪಟೇಲ್, ರಿಫಾಯಿ ಪಟೇಲ್, ನಸೀಲ್ ಪಟೇಲ್, ರಯಾನ್ ಪಟೇಲ್ ಹಾಗೂ ಅಮಾನ್ ಪಟೇಲ್ ಸೇರಿದಂತೆ ಹಲವರು ಉಪಸ್ಥಿತರಿದ್ದು.
ಈ ಸಂದರ್ಭದಲ್ಲಿ ಭಾಗವಹಿಸಿದವರು ಟಿ ಎಂ ಶಾಹಿದ್ ತೆಕ್ಕಿಲ್ ಅವರ ಮುಂದಿನ ಸಾರ್ವಜನಿಕ ಜೀವನಕ್ಕೆ ಶುಭಾಶಯಗಳನ್ನು ತಿಳಿಸಿ, ಇಂತಹ ಸನ್ಮಾನ ಕಾರ್ಯಕ್ರಮಗಳು ಸಮಾಜದಲ್ಲಿ ಸೇವಾ ಮನೋಭಾವವನ್ನು ಉತ್ತೇಜಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮವು ಆತ್ಮೀಯ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು.ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರು ಎಲ್.

Leave a Reply

Your email address will not be published. Required fields are marked *