2025-26 ನೇ ಸಾಲಿನ ಎಸ್ಸೆಸ್ಸೆಲ್ಸಿ (SSLC) ಪರೀಕ್ಷಾ ಫಲಿತಾಂಶದಲ್ಲಿ ಸೈಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿನಿ ದಿಯಾ ಹಾಜಿರಾ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಒಟ್ಟು 625 ಅಂಕಗಳಲ್ಲಿ 611 ಅಂಕಗಳನ್ನು ಗಳಿಸಿರುವ ಇವರು, ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ. ದಿಯಾ ಹಾಜಿರಾ ಅವರು ಬಶೀರ್ ಕೆ. ಪಿ. ಮತ್ತು ರಾಹಿಲಾ ದಂಪತಿಯ ಪುತ್ರಿಯಾಗಿದ್ದಾರೆ.
🛒 Recommended for You:
ವಿದ್ಯಾರ್ಥಿನಿಯ ಈ ಅತ್ಯಮೂಲ್ಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿ, ಮುಂದಿನ ವ್ಯಾಸಂಗಕ್ಕೆ ಶುಭ ಹಾರೈಸಿದ್ದಾರೆ.




