ಸುಳ್ಯದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿ ವ್ಯಕ್ತಿಯೊಬ್ಬರು ದಿಢೀರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಗುರುವಾರ (ಏಪ್ರಿಲ್ 23) ಸಂಜೆ ಸಂಭವಿಸಿದೆ.

​ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಆದರೆ, ಪ್ರಾಥಮಿಕ ಮಾಹಿತಿಯ ಪ್ರಕಾರ ಇವರು ಕೇರಳ ಮೂಲದವರು ಎಂದು ಶಂಕಿಸಲಾಗಿದೆ. ಘಟನೆಯ ಬಳಿಕ ಸುಳ್ಯದ ಎಸ್.ವೈ.ಎಸ್ (SYS) ಹಾಗೂ ಎಸ್.ಎಸ್.ಎಫ್ (SSF) ಆಂಬುಲೆನ್ಸ್ ಮೂಲಕ ಮೃತದೇಹವನ್ನು ತಕ್ಷಣವೇ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

​ಮಾಹಿತಿ ತಿಳಿದ ಕೂಡಲೇ ಸುಳ್ಯ ಪೊಲೀಸರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತರ ಹಿನ್ನೆಲೆ ಮತ್ತು ಸಾವಿಗೆ ನಿಖರ ಕಾರಣ ಪೊಲೀಸ್ ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *