ಸುಳ್ಯ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹಾಗೂ ಎಲ್.ಪಿ.ಜಿ (LPG) ಮತ್ತು ಸಿ.ಎನ್.ಜಿ (CNG) ಗ್ಯಾಸ್ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ಖಂಡಿಸಿ ಏಪ್ರಿಲ್ 27ರ ಸೋಮವಾರದಂದು ಸುಳ್ಯದಲ್ಲಿ ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

​ಯುವ ಕಾಂಗ್ರೆಸ್ ಸಮಿತಿ ಸುಳ್ಯ ಬ್ಲಾಕ್, ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ, ಯುವ ಕಾಂಗ್ರೆಸ್ ಸಮಿತಿ ಸುಳ್ಯ ವಿಧಾನಸಭಾ ಕ್ಷೇತ್ರ, ಇಂಟಕ್ ಸ್ನೇಹ ಸಂಗಮ ರಿಕ್ಷಾ ಯೂನಿಯನ್ ಸುಳ್ಯ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್‌ನ ಎಲ್ಲಾ ಘಟಕಗಳ ಸಹಯೋಗದೊಂದಿಗೆ ಈ ಬೃಹತ್ ಪ್ರತಿಭಟನೆ ನಡೆಯಲಿದೆ.

​ಏಪ್ರಿಲ್ 27ರಂದು ಸಂಜೆ 5.00 ಗಂಟೆಗೆ ಸುಳ್ಯದಲ್ಲಿ ಈ ಪ್ರತಿಭಟನಾ ಮೆರವಣಿಗೆ ಮತ್ತು ಸಭೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರಿಕ್ಷಾ ಚಾಲಕರು, ಸಾರ್ವಜನಿಕರು ಹಾಗೂ ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಧ್ವನಿಯಾಗುವಂತೆ ಆಯೋಜಕರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *