ಸುಳ್ಯ: ಸುಳ್ಯದಿಂದ ಮಡಿಕೇರಿ ಕಡೆಗೆ ಸಂಚರಿಸುತ್ತಿದ್ದ ಬ್ರೆಝಾ ಕಾರೊಂದು ಪೆರಾಜೆ ಬಳಿ ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.

ಪ್ರಾಥಮಿಕ ಮಾಹಿತಿಗಳ ಪ್ರಕಾರ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಯಾವುದೇ ಗಂಭೀರ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಬೆನ್ನಲ್ಲೇ ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಕ್ಷಣವೇ ಸುಳ್ಯದ ಕೆ.ವಿ.ಜಿ (KVG) ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಪ್ರಸ್ತುತ ಪೆರಾಜೆ ಹಾಗೂ ಸುಳ್ಯ ಪರಿಸರದಲ್ಲಿ ಮಳೆಯಾಗುತ್ತಿದ್ದು, ರಸ್ತೆಗಳು ಜಾರುತ್ತಿರುವುದರಿಂದ ವಾಹನ ಸವಾರರು ಅತ್ಯಂತ ಜಾಗರೂಕರಾಗಿ ಚಾಲನೆ ಮಾಡುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.

Leave a Reply

Your email address will not be published. Required fields are marked *