ಬೆಂಗಳೂರು ಅಗಸ್ಟ್ 17: ಕೇವಲ 5 ಕೋಟಿಯಲ್ಲಿ ತಯಾರಾದ ಸು ಫ್ರಮ್ ಸೋ ಸಿನೆಮಾ ನೂರು ಕೋಟಿ ಕಲೆಕ್ಷನ್ ಮಾಡುವ ಮೂಲಕ ದಾಖಲೆ ನಿರ್ಮಿಸಿದೆ. ಹಾರರ್ ಕಾಮಿಡಿ ಕಥಾಹಂದರದ ‘ಸು ಫ್ರಮ್ ಸೋ’ ಕರಾವಳಿಯ ಸೈಡ್ ನ ಕಥಾಹಂದರ ಇರುವ ಈ ಸಿನೆಮಾ ಈ ಮಟ್ಟದ ಯಶಸ್ಸನ್ನು ಪಡೆಯುತ್ತದೆ ಎಂದು ಯಾರೂ ಉಹಿಸಿಲ್ಲ. ಇದೀಗ ಬಿಡುಗಡೆ ಆಗಿ ಉತ್ತಮ ವಿಮರ್ಶೆ ಪಡೆದುಕೊಳ್ಳಲು ಆರಂಭಿಸಿದ ಬಳಿಕ ಎಲ್ಲರ ಬಾಯಲ್ಲೂ ಇದೇ ಸಿನಿಮಾದ ಚರ್ಚೆ ಶುರು ಆಯಿತು. ಅದರ ಪರಿಣಾಮವಾಗಿ ‘ಸು ಫ್ರಮ್ ಸೋ’ ಸಿನಿಮಾ ಅದ್ಭುತ ಕಲೆಕ್ಷನ್ ಮಾಡಿದೆ. sacnilk ವರದಿ ಪ್ರಕಾರ, ವಿಶ್ವದಾದ್ಯಂತ ಈ ಚಿತ್ರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ.
ಜೆ.ಪಿ. ತುಮಿನಾಡು ಅವರು ‘ಸು ಫ್ರಮ್ ಸೋ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಜೆ.ಪಿ. ತುಮಿನಾಡು, ರಾಜ್ ಬಿ. ಶೆಟ್ಟಿ, ದೀಪಕ್ ರೈ ಪಣಾಜೆ, ಪ್ರಕಾಶ್ ತುಮಿನಾಡು, ಸಂಧ್ಯಾ ಅರಕೆರೆ, ಶನೀಲ್ ಗೌತಮ್, ಮೈಮ್ ರಾಮದಾಸ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಎಲ್ಲರ ಅಭಿನಯಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಹೊಸ ಸಿನಿಮಾಗಳು ಬಿಡುಗಡೆ ಆಗುತ್ತಿದ್ದರೂ ಕೂಡ ‘ಸು ಫ್ರಮ್ ಸೋ’ ಹವಾ ಕಡಿಮೆ ಆಗಿಲ್ಲ.
ಬಿಡುಗಡೆ ಆಗಿ 24 ದಿನ ಕಳೆದರೂ ಸಹ ‘ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದೆ. 23 ದಿನಕ್ಕೆ ಕರ್ನಾಟಕದಲ್ಲಿ ಈ ಸಿನಿಮಾ 69.2 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮಲಯಾಳಂನಲ್ಲಿ 5.07 ಕೋಟಿ ರೂಪಾಯಿ, ತೆಲುಗಿನಲ್ಲಿ 1.23 ಕೋಟಿ ರೂಪಾಯಿ ಗಳಿಸಿದೆ. ವಿದೇಶದ ಗಳಿಕೆಯನ್ನೂ ಸೇರಿಸಿದರೆ 100.99 ಕೋಟಿ ರೂಪಾಯಿ ಆಗಲಿದೆ.