ಸುಳ್ಯ/ಅರಂತೋಡು: ಸರ್ಕಾರಿ ಸಾರಿಗೆ ಬಸ್ ಹಾಗೂ ಆಲ್ಟೊ ಕಾರಿನ ನಡುವೆ ಅರಂತೋಡು ಬಸ್ ನಿಲ್ದಾಣದ ಬಳಿ ರಸ್ತೆ ಅಪಘಾತ ಸಂಭವಿಸಿದೆ.

ಸಾರಿಗೆ ಬಸ್ ಅರಂತೋಡು ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಹತ್ತಿಸಲು ನಿಂತಿದ್ದಾಗ, ಅದೇ ಮಾರ್ಗದಲ್ಲಿ ಹಿಂದಿನಿಂದ ಬಂದ ಆಲ್ಟೊ ಕಾರು ಬಸ್ನ ಹಿಂಭಾಗಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ರಭಸಕ್ಕೆ ಮಹಿಳೆಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಲ್ಟೊ ಕಾರಿನ ಮುಂಭಾಗ ಜಖಂಗೊಂಡಿದೆ (ಡೆಂಟ್ ಬಿದ್ದಿದೆ). ಹಾಗೆಯೇ ಸಾರಿಗೆ ಬಸ್ನ ಹಿಂಭಾಗಕ್ಕೂ ಹಾನಿಯಾಗಿದೆ.
🛒 Recommended for You:




