ಪುತ್ತೂರಿನಿಂದ ಸುಳ್ಯದ ಕಡೆಗೆ ಸಂಚರಿಸುತ್ತಿದ್ದ ಬಸ್ಸಿಗೆ ಹಿಂಬದಿಯಿಂದ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಘಟನೆ ಅಡ್ಕಾರ್ ಬಳಿ ನಡೆದಿದೆ.

​ಬಸ್ ಚಾಲಕ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ರಸ್ತೆಯ ಬದಿಗೆ ವಾಹನವನ್ನು ನಿಲ್ಲಿಸದೆ, ರಸ್ತೆ ಮಧ್ಯೆಯೇ ದಿಢೀರನೆ ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿದ ಪರಿಣಾಮ ಅದೇ ಮಾರ್ಗದಲ್ಲಿ ಹಿಂದಿನಿಂದ ಬರುತ್ತಿದ್ದ ಟ್ರ್ಯಾಕ್ಟರ್ ಬಸ್ಸಿನ ಹಿಂಭಾಗಕ್ಕೆ ಅಪ್ಪಳಿಸಿದೆ.

​ಈ ಅಪಘಾತದಲ್ಲಿ ಓರ್ವ ವ್ಯಕ್ತಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ವಾಹನಗಳಿಗೆ ಹಾನಿಯಾಗಿದೆ.

Leave a Reply

Your email address will not be published. Required fields are marked *